Air India Recruitment 2023: ಏರ್ ಇಂಡಿಯಾ ಲಿಮಿಟೆಡ್(Air India Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಸೀನಿಯರ್ ಟ್ರೈನಿ ಪೈಲಟ್(Senior Trainee Pilot) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.
ಜನವರಿ 1, 2023 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರು, ಮುಂಬೈ ಹಾಗೂ ನವದೆಹಲಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಆಸಕ್ತರು ಈ ಕೂಡಲೇ ಅಪ್ಲೈ ಮಾಡಿ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಮಾಡಿ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 23/12/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 01/01/2023
ಲಿಖಿತ ಪರೀಕ್ಷೆ ನಡೆಯುವ ದಿನಾಂಕ: 08/01/2023
ಸಂದರ್ಶನ ಶುರುವಾಗುವ ದಿನಾಂಕ: ಜನವರಿ 2ನೇ ವಾರ, 2023
ಶೈಕ್ಷಣಿಕ ಅರ್ಹತೆ:
ಏರ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ ಪಾಸಾಗಿರಬೇಕು.
ವಯೋಮಿತಿ:
ಏರ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 30 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ:
ಶುಲ್ಕ ವಿನಾಯಿತಿ ನೀಡಲಾಗಿದೆ.
ವೇತನ:
ನಿಯಮಾನುಸಾರ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಉದ್ಯೋಗದ ಸ್ಥಳ:
ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರು, ಮುಂಬೈ ಹಾಗೂ ನವದೆಹಲಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
.png)
Comments
Post a Comment